ಸರಣಿ ಅಪಘಾತ- ಬೈಕ್ ಸವಾರನ ಮೇಲೆ ಹರಿದ ಕ್ಯಾಂಟರ್ – ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಅ. 14. ಕ್ಯಾಂಟರ್‌, ಕಾರು ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಡಿಕೇರಿ- ಸುಂಟಿಕೊಪ್ಪ ಹೆದ್ದಾರಿಯಲ್ಲಿ ಶುಕ್ರವಾರದಂದು ನಡೆದಿದೆ.


ಮೃತ ಸವಾರನನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರದ ಭೈರವ(30) ಎಂದು ಗುರುತಿಸಲಾಗಿದೆ. ಬೈರವ ಅವರು ಮಡಿಕೇರಿಯಿಂದ ಕೆ.ಆರ್.ನಗರದ ಕಡೆಗೆ ಪಲ್ಸರ್ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಪಕ್ಕಕ್ಕೆ ಬಿದ್ದಿದ್ದಾರೆ. ಇದೇ ವೇಳೆ ಎದುರಿನಿಂದ ಬರುತ್ತಿದ್ದ ಕ್ಯಾಂಟರ್‌ನ ಹಿಂದಿನ ಚಕ್ರ ಇವರ ಮೇಲೆ ಹರಿದಿದೆ. ಇದರಿಂದ ತೀವ್ರ ಗಾಯಗೊಂಡ ಭೈರವ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top