(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 14. ರಾಜ್ಯದಲ್ಲಿ ವಿದ್ಯುತ್ ಕೊರತೆಯ ಹಿನ್ನೆಲೆ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದ್ದು, ಇದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದರ ಬೆನ್ನಲ್ಲೇ ಇಂಧನ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯರವರು, ಕೃಷಿ ಪಂಪ್‌ಸೆಟ್‌ಗೆ ಕನಿಷ್ಠ 5 ಗಂಟೆ ನಿರಂತರ ವಿದ್ಯುತ್ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಇದರ ಜೊತೆಗೆ ನವೆಂಬರ್ ತಿಂಗಳಿನಿಂದ ಉತ್ತರ ಪ್ರದೇಶದಿಂದ 300 ಮೆಗಾವ್ಯಾಟ್, ಪಂಜಾಬ್ ನಿಂದ 600 ಮೆಗಾವ್ಯಾಟ್, ಮತ್ತು KERC ಅನುಮೋದನೆಯೊಂದಿಗೆ 1,300-1,500 ಮೆಗಾವ್ಯಾಟ್ ಅಲ್ಪಾವಧಿ ವಿದ್ಯುತ್ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿರುವುದಾಗಿ ವರದಿಯೊಂದು ತಿಳಿಸಿದೆ.