ತಲೆಮರೆಸಿಕೊಂಡಿದ್ದ ಹಳೆಯ ಪ್ರಕರಣಗಳ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೋರ್ವನನ್ನು ಮಂಗಳೂರು ಗ್ರಾಮಾಂತರ ಪೊಲೀಸರು ರವಿವಾರದಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಜಾಲ್ ಫೈಸಲ್ ನಗರದ ತೌಸೀಫ್ (27)ಎಂದು ಗುರುತಿಸಲಾಗಿದೆ. 2016ರಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ ಆರೋಪಿಯು ಕಳೆದ ನಾಲ್ಕು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಈ‌ ಬಗ್ಗೆ ‌ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಆರೋಪಿಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಶಕ್ಕೆ ಪಡೆದು‌ ಮಂಗಳೂರಿಗೆ‌ ಕರೆತಂದು‌‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ‌ ನ್ಯಾಯಾಂಗ ‌ಬಂಧನ ವಿಧಿಸಿದೆ ಎನ್ನಲಾಗಿದೆ.

Scroll to Top