ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ನೋಂದಣಿ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಅಕ್ಟೋಬರ್ 17ರಿಂದ ಹಮ್ಮಿಕೊಳ್ಳಲಾಗಿದೆ.

ಅಕ್ಟೋಬರ್17ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ, ಅಕ್ಟೋಬರ್ 18ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಅಕ್ಟೋಬರ್ 21ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ

error: Content is protected !!
Scroll to Top