(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.10. ಕಳೆದ ಒಂದು ವರ್ಷದಲ್ಲಿ ಬ್ಯಾಂಕ್ ಖಾತೆಗಳಿಗೆ ದೊಡ್ಡ ಮೊತ್ತವನ್ನು ಜಮಾ ಮಾಡಿದಲ್ಲಿ, ಇಲ್ಲವೇ ದೊಡ್ಡ ಮೊತ್ತದ ವಹಿವಾಟು ನಡೆಸಿದಲ್ಲಿ ಅದರ ಮಾಹಿತಿಯನ್ನು ನೀಡುವಂತೆ ಆದಾಯ ತೆರಿಗೆ ಇಲಾಖೆ ಸೂಚಿಸಿದ್ದು, ಮಾಹಿತಿ ನೀಡದವರಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದೆ.
ಆದಾಯ ತೆರಿಗೆ ಮಾಹಿತಿ ಸಲ್ಲಿಕೆಗೆ ಮಾರ್ಚ್ 31 ಕೊನೆಯ ದಿನವಾಗಿದೆ. ವಿನಾಯಿತಿ ಲೆಕ್ಕಾಚಾರ ನಡೆಸುವ ಮೊದಲು ತಮ್ಮ ಖಾತೆಗಳಿಗೆ ದೊಡ್ಡ ಮೊತ್ತದ ಜಮಾ ಮಾಡಿದವರು ಮಾಹಿತಿ ನೀಡಬೇಕು. ಇಲ್ಲದಿದ್ದರೆ, ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ವ್ಯಕ್ತಿಗಳು, ಕಂಪನಿಗಳು, ಟ್ರಸ್ಟ್ ಗಳು, ರಾಜಕೀಯ ಪಕ್ಷಗಳು, ಸಂಘಟನೆಗಳಿಗೆ ಇದು ಅನ್ವಯವಾಗಲಿದೆ.