ರೈಲಿಗೆ ಸಿಲುಕಿ ಸ್ಟೇಷನ್ ಮಾಸ್ಟರ್ ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ನ. 23. ರೈಲಿಗೆ ಸಿಲುಕಿ ರೈಲ್ವೇ ಸ್ಟೇಷನ್ ಮಾಸ್ಟರ್ ಓರ್ವರು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿಯಲ್ಲಿ ನಡೆದಿದೆ.

ಮೃತರನ್ನು ಬಿಹಾರ ಮೂಲದ, ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಅರುಣ್‍ಕುಮಾರ್ ಎಂದು ಗುರುತಿಸಲಾಗಿದೆ.
ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ರೈಲಿನಲ್ಲಿ ಆಗಮಿಸಿದ ಅವರು ಕುಮ್ಸಿ ನಿಲ್ದಾಣದಲ್ಲಿ ಇಳಿದಿದ್ದರು. ಈ ಸಂಬಂಧ ಶಿವಮೊಗ್ಗ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Scroll to Top