ಒಂದು ವಾರದೊಳಗೆ ‘ಗೃಹಲಕ್ಷ್ಮೀ ಅದಾಲತ್ʼ ಆರಂಭ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ರಾಜ್ಯ ಸರಕಾರದ ಗ್ಯಾರಂಟಿಗಳ ಪೈಕಿ ಒಂದಾದ ‘ಗೃಹಲಕ್ಷ್ಮೀ’ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ತೊಂದರೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಅದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ಕುರಿತು ಗುರುವಾರದಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿದ್ದು, ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ ಪಂಚಾಯತ್, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಸಭೆ ನಡೆಸಿ ಹಣ ಹಾಕುವ ವ್ಯವಸ್ಥೆ ಮಾಡಲಾಗುವುದು ಎಂದರು. ಈಗಾಗಲೇ ಮೂರು ಕಂತಿನ ದುಡ್ಡು ಬಾರದೇ ಇದ್ದವರಿಗೆ ಏಕಕಾಲಕ್ಕೆ ಆರು ಸಾವಿರ ದುಡ್ಡು ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಗೃಹ ಲಕ್ಷ್ಮೀ ಯೋಜನೆಗೆ ಸುಮಾರು 50 ಸಾವಿರ ತೆರಿಗೆದಾರರು ಕೂಡ ಅರ್ಜಿ ಹಾಕಿದ್ದು, ಅರ್ಜಿಗಳನ್ನು ನಿರಾಕರಿಸಿ ರದ್ದು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Also Read  ಲಾಕ್​ಡೌನ್​ ಸಡಿಲಿಕೆ ಕುರಿತು ಇನ್ನೆರಡು ದಿನಗಳಲ್ಲಿ ಸಿಎಂ ಚರ್ಚೆ

error: Content is protected !!
Scroll to Top