ಬಜ್ಪೆ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ► ಪರ್ಸ್, ಎಟಿಎಂ ಕಾರ್ಡ್ ಕಿತ್ತು ಪರಾರಿಯಾದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.10. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಗೆ ದುಷ್ಕರ್ಮಿಗಳ ತಂಡವೊಂದು ಲೈಂಗಿಕ ಕಿರುಕುಳ ನೀಡಿದ ಘಟನೆ ಶುಕ್ರವಾರದಂದು ತಡರಾತ್ರಿ ನಡೆದಿದೆ.

ಮಂಗಳೂರಿನ ಮರವೂರು ಬಳಿ ಶುಕ್ರವಾರ ತಡರಾತ್ರಿ ಮಹಿಳಾ ಸಿಬ್ಬಂದಿ ಇರುವ ಕಾರನ್ನು ಅಡ್ಡಗಟ್ಟಿದ ಏಳು ಮಂದಿ ದುಷ್ಕರ್ಮಿಗಳ ತಂಡ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಪರ್ಸ್, ಎಟಿಎಮ್ ಕಾರ್ಡ್ ಕಿತ್ತು ಪರಾರಿಯಾಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ. ನಂತರ ದುಷ್ಕರ್ಮಿಗಳ ತಂಡ ಕಾರಿಗೆ ಕಲ್ಲು ತೂರಿ ಸ್ಥಳದಿಂದ ಪರಾರಿಯಾಗಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬಜ್ಪೆ ಪೊಲೀಸರು ಆರೋಪಿಗಳ ಪತ್ತೆಗೆ ಬೀಸಿದ್ದಾರೆ.

Also Read  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ ➤ ಅರ್ಜಿ ಆಹ್ವಾನ

error: Content is protected !!
Scroll to Top