ಕಾರು ಹಾಗೂ ಬೋರ್’ವೆಲ್ ಲಾರಿ ನಡುವೆ ಢಿಕ್ಕಿ – ಕಂಬಳ ವೀಕ್ಷಿಸಿ ಹಿಂತಿರುಗುತ್ತಿದ್ದ ಕರಾವಳಿಯ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.26. ಬೋರ್ ವೆಲ್ ಲಾರಿ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕರಾವಳಿಯ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕುಣಿಗಲ್ ಠಾಣಾ ವ್ಯಾಪ್ತಿಯ ಕೊತ್ತಗೆರೆ ಹೋಬಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತರನ್ನು ಬಜಪೆ ನಿವಾಸಿ ಕಿಶಾನ್ ಶೆಟ್ಟಿ, ಫಿಲಿಪ್ ಲೋಬೋ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ನಿತೀಶ್ ಭಂಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ನಡೆಯುತ್ತಿರುವ ಐತಿಹಾಸಿಕ ಕಂಬಳ ಕಾರ್ಯಕ್ರಮವನ್ನು ವೀಕ್ಷಿಸಿ ಊರಿಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕುಣಿಗಲ್ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Also Read  ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ವತಿಯಿಂದ ಬೃಹತ್ ರಕ್ತದಾನ ಶಿಬಿರ..!

error: Content is protected !!
Scroll to Top