(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.06. ಗೂಡ್ಸ್ ಟೆಂಪೋವೊಂದಕ್ಕೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ಟೆಂಪೋಲ್ಲಿದ್ದ ಇಬ್ಬರು ಮೃತಪಟ್ಟ ದಾರುಣ ಘಟನೆ ಶಿರಾಡಿ ಘಾಟ್ ನ ಗುಂಡ್ಯ ಕೆಂಪು ಹೊಳೆ ಸಮೀಪ ಬುಧವಾರ ಬೆಳಗಿನ ಜಾವ ನಡೆದಿದೆ.
ಅಪಘಾತದಲ್ಲಿ ಗೂಡ್ಸ್ ವಾಹನದ ಚಾಲಕ ಹಾಗೂ ಇನ್ನೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರನ್ನು ಹಾಸನ ನಿವಾಸಿಗಳು ಎಂದು ಗುರುತಿಸಲಾಗಿದೆ. ಶಿರಾಡಿ ಘಾಟ್ ನ ಕೆಂಪು ಹೊಳೆ ಸಮೀಪ ಈ ಘಟನೆ ನಡೆದಿದ್ದು, ಯಾವುದೋ ಅಪರಿಚಿತ ಘನ ವಾಹನ ಢಿಕ್ಕಿಯಾಗಿ ಪರಾರಿಯಾಗಿರುವುದಾಗಿ ಶಂಕಿಸಲಾಗಿದೆ. ಘಟನೆಯಲ್ಲಿ ಗೂಡ್ಸ್ ಟೆಂಪೋ ಸಂಪೂರ್ಣ ಜಖಂ ಗೊಂಡಿದೆ. ಸ್ಥಳಕ್ಕೆ ಸಕಲೇಶಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.