ಪುತ್ತೂರು: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ – ಕಡಬದ ಯುವಕನಿಗೆ ಜಾಮೀನು

crime, arrest, suspected

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.07. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ, ನಂತರ ಅತ್ಯಾಚಾರಗೈದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಕಡಬದ ಯಜ್ಞೇಶ್ ಎಂಬವರಿಗೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿ, ಅಪ್ರಾಪ್ತ ಬಾಲಕಿಯೋರ್ವಳು ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಎಂದಿನಂತೆ ಕಾಲೇಜಿಗೆಂದು ತೆರಳಿದ್ದು, ಸ್ಪೆಷಲ್ ಕ್ಲಾಸ್ ಇರುವ ಹಿನ್ನಲೆಯಲ್ಲಿ ಮೂರು ದಿನಗಳ ಕಾಲ ತನ್ನ ಸ್ನೇಹಿತೆಯ ಮನೆಯಲ್ಲಿ ನಿಲ್ಲುವುದಾಗಿ ತಿಳಿಸಿ ತೆರಳಿದ್ದಳು ಎನ್ನಲಾಗಿದೆ. ಬಳಿಕ ಅಪ್ರಾಪ್ತ ಬಾಲಕಿಯು ಮನೆಗೆ ಫೋನ್ ಮಾಡದೆ ಇದ್ದುದರಿಂದ ಅವಳ ಸ್ನೇಹಿತೆಯಲ್ಲಿ ವಿಚಾರಿಸಿದಾಗ, ಅವಳು ಸ್ನೇಹಿತೆಯ ಮನೆಗೆ ಹೋಗದೆ ಇರುವುದನ್ನು ತಿಳಿದು, ನಂತರ ಕಾಲೇಜಿನಲ್ಲಿ ವಿಚಾರಿಸಿದಾಗ ಮಧ್ಯಾಹ್ನದವರೆಗೆ ಕಾಲೇಜಿಗೆ ಬಂದು ನಂತರ ಬಂದಿರುವುದಿಲ್ಲ ಎಂಬುವುದು ತಿಳಿದುಬಂದ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕಿಯ ತಂದೆಯು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ನಡುವೆ ಅಪ್ರಾಪ್ತ ಬಾಲಕಿಯು ಮೂರು ದಿನಗಳ ನಂತರ ತನ್ನ ತಂದೆಯೊಂದಿಗೆ ಪೊಲೀಸ್ ಠಾಣೆಗೆ ಹಾಜರಾಗಿ ಆರೋಪಿಯನ್ನು ಕಳೆದ ಮೂರು ತಿಂಗಳಿನಿಂದ ಪ್ರೀತಿಸುತ್ತಿದ್ದು, ಆರೋಪಿಯು ಆತನ ಸಂಬಂಧಿಕರ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿರುವುದಾಗಿ ಹೇಳಿಕೆಯನ್ನು ನೀಡಿದ್ದಳು. ಈ ಆಧಾರದಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದರು.

Also Read  ಬುಧವಾರದಂದು 24 ನೇ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರಕ್ಕೆ ► ಸೋಮವಾರದಿಂದ ಬುಧವಾರಕ್ಕೆ ಮುಂದೂಡಲು ಕಾರಣವೇನು ಗೊತ್ತೇ..?

ಆರೋಪಿಯು ತನ್ನ ಪರ ವಕೀಲರಾದ ಕಜೆ ಲಾ ಚೇಂಬರ್ಸ್ ನ ಮಹೇಶ್ ಕಜೆ ಅವರ ಮೂಲಕ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಾದ – ವಿವಾದವನ್ನು ಆಲಿಸಿದ ಪುತ್ತೂರಿನ ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರೂ, ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ಎಸ್.ವಿ. ರವರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.

Also Read  ಸುಳ್ಯ: 13 ವರ್ಷದ ಬಾಲಕಿಯ ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಭೂಪ ► ಬುದ್ಧಿವಂತರ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ

error: Content is protected !!
Scroll to Top