ಕಡಬ: 15 ಕೋಟಿ ವೆಚ್ಚದ ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ಇಂದು ಶಿಲಾನ್ಯಾಸ *➤ ರಾಜ್ಯ, ರಾಷ್ಟ್ರ ಮಟ್ಟದ ನಾಯಕರು ಇಂದು ಕಡಬಕ್ಕೆ ಆಗಮನ

(ನ್ಯೂಸ್ ಕಡಬ) newskadaba.com ಕಡಬ, ಡಿ.26. ಇಲ್ಲಿನ ಹೊಸಮಠ ನದಿ ಕಿನಾರೆಯಲ್ಲಿ ತಲೆ ಎತ್ತಲಿರುವ ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಸಮುದಾಯ ಸಭಾಭವನದ ಶಿಲಾನ್ಯಾಸ ಕಾರ್ಯಕ್ರಮ ಇಂದು (ಡಿ.26) ನೆರವೇರಲಿದ್ದು, ಇದಕ್ಕಾಗಿ ಸಕಲ ಸಿದ್ದತೆಗಳು ನಡೆದಿದೆ. ನದಿ ಕಿನಾರೆಯ ಸುಮಾರು 3 ಎಕ್ರೆ ಜಾಗದಲ್ಲಿ ಅಂದಾಜು 15 ಕೋಟಿ ವೆಚ್ಚದಲ್ಲಿ ಎಲ್ಲಾ ಸಮುದಾಯಗಳ, ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 3 ದರ್ಜೆಯ ಸಮುದಾಯ ಭವನ ನಿರ್ಮಾಣ ಕಾರ್ಯ ನಡೆಯಲಿದೆ. ಇದರ ಶಿಲಾನ್ಯಾಸದ ಜೊತೆಗೆ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನೆ, ಕಡಬ ತಾಲೂಕು ನೂತನ ಸಮಿತಿಯ ಪದಗ್ರಹಣ ನಡೆಯಲಿದೆ. ಯಶಸ್ವಿ ಕಾರ್ಯಕ್ರಮಕ್ಕಾಗಿ ಸಮುದಾಯದ ಕಾರ್ಯಕರ್ತರು ಕಳೆದ ಹಲವು ದಿನಗಳಿಂದ ಹಗಲಿರುಳು ಎನ್ನದೆ ದುಡಿಯುತ್ತಿದ್ದಾರೆ. ಕಾರ್ಯಕ್ರಮದ ಯಶಸ್ವಿಗೆ ರಚಿಸಿದ ವಿವಿಧ ಸಮಿತಿಗಳ ಕಾರ್ಯಕರ್ತರು ತನ್ನ ಸೇವೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿ ತಳಿರು ತೋರಣಗಳಿಂದ ಶೃಂಗಾರಗೊಂಡಿದೆ. ಮಂಗಳೂರು ಆದಿಚುಂಚನಗಿರಿ ಕಾವೂರು ಶಾಖಾ ಮಠದ ಡಾ. ಧರ್ಮಪಾಲನಾಥ ಸ್ವಾಮೀಜಿಯವರ ನಿರಂತರ ಮಾರ್ಗದರ್ಶನದಲ್ಲಿ ಸಿದ್ದತೆಯ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದೆ.

Also Read  ಮರ ಉಳಿಸಿ, ಬೆಳೆಸಿ, ಪೋಷಿಸಿ- ಡಾ.ಚೂಂತಾರು

ಇಂದು ಬೆಳಿಗ್ಗೆ 9.00ಕ್ಕೆ ಕಡಬ ಒಕ್ಕಲಿಗ ಸ್ಪಂದನ ಸಮುದಾಯ ಸಹಕಾರ ಸಂಘದ ಉದ್ಘಾಟನೆ, ಕಡಬದಿಂದ ಹೊಸಮಠದವರೆಗೆ ವಾಹನಾ ಜಾಥಾ ಮೆರವಣಿಗೆ ಉದ್ಘಾಟನೆ, ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಪೀಠಾಧ್ಯಕ್ಷರು ಡಾ| ನಿರ್ಮಾಲಾನಂದನಾಥ ಮಹಾ ಸ್ವಾಮೀಜಿಯವರಿಂದ 10.15ಕ್ಕೆ ಶಿಲಾನ್ಯಾಸ ಬಳಿಕ ಸಭಾ ಕಾರ್ಯಕ್ರಮ ಪ್ರಾರಂಭವಾಗಲಿದೆ. ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮ, ತುಳು ನಾಟಕ, ಯಕ್ಷಗಾನ ಸಾಧಕರಿಗೆ ಸನ್ಮಾನ ನಡೆಯಲಿದೆ. ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಸತಿ ನಿಲಯ, ವಾಣಿಜ್ಯ ಸಂಕೀರ್ಣಕ್ಕೆ ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಲಿದ್ದಾರೆ. ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘ ನಿಯಮಿತದ ಉದ್ಘಾಟನೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೆರವೇರಿಸಲಿದ್ದಾರೆ. ಸಭಾ ಕಾರ‍್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ. ಸಿ. ಸುಧಾಕರ್ ನೆರವೇರಿಸಲಿದ್ದಾರೆ. ವಿಪಕ್ಷ ನಾಯಕ ಆರ್ ಆಶೋಕ್ ಜಾಥ ಉದ್ಘಾಟಿಸಲಿದ್ದಾರೆ. ಸಂಘದ ಸದಸ್ಯರಿಗೆ ಗೌರವಾರ್ಪಣೆಯನ್ನು ಮಾಜಿ ಉಪಮುಖ್ಯಮಂತ್ರಿ ಸಿ.ಎನ್. ಅಶ್ವಥ್ ನಾರಾಯಣ್ ನೆರವೇರಿಸಲಿದ್ದಾರೆ. ಮಂಗಳೂರು ಆದಿಚುಂಚನಗಿರಿ ಕಾವೂರು ಶಾಖಾ ಮಠದ ಡಾ. ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕಡಬ ಒಕ್ಕಲಿಗೆ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು ಅಧ್ಯಕ್ಷತೆ ವಹಿಲಿದ್ದಾರೆ.

Also Read  ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ ಸಿಎಂ ಸಿದ್ದರಾಮಯ್ಯ ಘೋಷಣೆ

error: Content is protected !!
Scroll to Top