ಸುಳ್ಯ: ಸ್ನಾನಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜ. 31. ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕನೋರ್ವ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತ ಯುವಕನನ್ನು ಕಾಸರಗೋಡು ವರ್ಕಾಡಿ, ಧರ್ಮನಗರದ ನಿವಾಸಿ ಸಮೀರ್(26) ಎಂದು ಗುರುತಿಸಲಾಗಿದೆ. ವಿಶನ್ ಆಪ್ಟಿಕಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಸುಳ್ಯದಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದು, ಡಿ. 31 ರಂದು ರಜೆ ಇದ್ದ ಹಿನ್ನೆಲೆ ಬಟ್ಟೆ ತೊಳೆಯಲು ಮತ್ತು ಸ್ನಾನಕ್ಕೆಂದು ಇತರ ಇಬ್ಬರು ಯುವಕರ ಜೊತೆ ನದಿಗೆ ಬಂದಿದ್ದರು. ಈ ಸಂದರ್ಭ ಸಮೀರ್ ನೀರಿನಲ್ಲಿ ಮುಳುಗಿದ್ದಾರೆ. ಬಳಿಕ ಪೊಲೀಸ್, ಅಗ್ನಿಶಾಮಕ ದಳ, ಮುಳುಗು ತಜ್ಞರು ಶೋಧ ನಡೆಸಿ ಮೃತದೇಹವನ್ನು ಪತ್ತೆ ಹಚ್ಚಿ ಹೊರ ತೆಗೆದರು. ಈ ಕುರಿತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top