ಕಡಬ: ಅಕ್ರಮ ಮರಳುಗಾರಿಕಾ ಅಡ್ಡೆಗೆ ಅಧಿಕಾರಿಗಳಿಂದ ದಾಳಿ – ಎರಡು ನಾಡ ದೋಣಿಗಳು ವಶಕ್ಕೆ

ಕಡಬ, ಜ.05. ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿರುವ ಅಧಿಕಾರಿಗಳು ಎರಡು ನಾಡ ದೋಣಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರದಂದು ಕಡಬ ತಾಲೂಕಿನ ಐತ್ತೂರು ಗ್ರಾಮದ ಬೀದಿಗುಡ್ಡೆ ಎಂಬಲ್ಲಿ ನಡೆದಿದೆ.

ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀದಿಗುಡ್ಡೆ ಸಮೀಪ ಕುಮಾರಧಾರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕಂದಾಯ, ಗಣಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ನಾಡದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವಸುಧಾ, ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್, ಐತ್ತೂರು ಗ್ರಾಮ ಲೆಕ್ಕಾಧಿಕಾರಿ ಶ್ರೀರಾಜ್ ಭಾಗವಹಿಸಿದ್ದರು.

Also Read  ಮಂಗಳೂರು: ಅ.15ರ ವರೆಗೆ ಮರಳುಗಾರಿಕೆ ನಿಷೇಧ

error: Content is protected !!
Scroll to Top