(ನ್ಯೂಸ್ ಕಡಬ) newskadaba.com ಕಡಬ, ಜ.08. ಚಲಿಸುತ್ತಿದ್ದ ಟಾಟಾ ಸುಮೋ ಹಾಗೂ ಅಂಗಡಿಯೊಂದರ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಜಂಕ್ಷನ್ ನಲ್ಲಿ ಸೋಮವಾರದಂದು ನಡೆದಿದೆ.
ಸುಬ್ರಹ್ಮಣ್ಯದಿಂದ ನೆಟ್ಟಣ ಕಡೆಗೆ ತೆರಳುತ್ತಿದ್ದ ಟಾಟಾ ಸುಮೋ ಹಾಗೂ ಕೈಕಂಬ ಜಂಕ್ಷನ್ ನಲ್ಲಿದ್ದ ಗೂಡಂಗಡಿಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಘಟನೆಯಲ್ಲಿ ವಾಹನ ಚಾಲಕ ಬಿಳಿನೆಲೆ ನಿವಾಸಿ ಶೇಖರ್ ಹಾಗೂ ಮತ್ತೋರ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.