ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ನೋಯ್ಡಾ, . 10. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಯುವಕರು ಮೃತಪಡುತ್ತಿರುವ ವರದಿಗಳು ಹೆಚ್ಚೆಚ್ಚು ಕೇಳಿ ಬರುತ್ತಿದೆ. ಅದೇ ರೀತಿ ಕ್ರಿಕೆಟ್ ಮ್ಯಾಚ್ ಆಡುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ ಹೃದಯಾಘಾತವಾಗಿ ಕುಸಿದುಬಿದ್ದು, ಮೃತಪಟ್ಟ ಘಟನೆ ನೋಯ್ಡಾದ ಥಾನಾ ಎಕ್ಸ್ ಪ್ರೆಸ್ ವೇ ಪ್ರದೇಶದ ಸೆಕ್ಟರ್ -135 ರಲ್ಲಿ ಬೆಳಕಿಗೆ ಬಂದಿದೆ.

ಮೃತ ವ್ಯಕ್ತಿ ಕ್ರಿಕೆಟ್ ಆಡುತ್ತಿದ್ದ ವೇಳೆ ರನ್‌ ತೆಗೆಯಲೆಂದು ಓಡುತ್ತಿದ್ದ ವೇಳೆ ಹಠಾತ್ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಆಟಗಾರರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರಾದರೂ, ಆದರೆ ಅಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದರು ಎನ್ನಲಾಗಿದೆ. ಸದ್ಯ ಘಟನೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Also Read  ಸಿಡಿಲಾರ್ಭಟಕ್ಕೆ ಮಹಿಳೆ ಸೇರಿದಂತೆ 6 ಕುರಿಗಳು ಬಲಿ

error: Content is protected !!
Scroll to Top