ನೀವು ವಿದೇಶದಲ್ಲಿ ಉನ್ನತ ವಿದ್ಯಾಭ್ಯಾಸ ಪಡೆಯಬೇಕೇ..? ► ಹಾಗಾದರೆ ಈ ಪರೀಕ್ಷೆಯಲ್ಲಿ ತೇರ್ಗಡೆ ಆಗಲೇಬೇಕು..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.11. ವಿದೇಶದ ವಿವಿಗಳಲ್ಲಿ ಎಂಬಿಬಿಎಸ್ ಅಧ್ಯಯನ ನಡೆಸ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ‘ನೀಟ್’ ತೇರ್ಗಡೆಯಾಗಬೇಕು ಎಂಬ ನಿಯಮವನ್ನು ಜಾರಿಗೆ ತರಲು ಸರಕಾರ ನಿರ್ಧರಿಸಿದೆ.

ಇದುವರೆಗೆ ದೇಶದ ಖಾಸಗಿ ಅಥವಾ ಸರಕಾರಿ ಮೆಡಿಕಲ್ ಕಾಲೇಜುಗಳಲ್ಲಿ ವೈದ್ಯಕೀಯ ಅಧ್ಯಯನ ನಡೆಸುವ ವಿದ್ಯಾರ್ಥಿಗಳಿಗೆ ಮಾತ್ರ ‘ನೀಟ್’ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ಅನ್ವಯವಾಗುತ್ತಿತ್ತು. ಇನ್ನು ಮುಂದೆ ‘ನೀಟ್’ ತೇರ್ಗಡೆಯಾದವರಿಗೆ ಮಾತ್ರ ನಿರಾಕ್ಷೇಪಣ ಪತ್ರ ನೀಡಲಾಗುವುದು ಎಂದು ಸರಕಾರ ತಿಳಿಸಿದೆ. ವೈದ್ಯಕೀಯ ಅಧ್ಯಯನಕ್ಕೆ ವಿದೇಶಗಳಿಗೆ ತೆರಳಿ, ಅಲ್ಲಿಯ ವಿವಿಯಿಂದ ಪದವಿ ಪಡೆದು ಮರಳುವ ವಿದ್ಯಾರ್ಥಿಗಳಲ್ಲಿ ಕೇವಲ ಶೇ.12 ರಿಂದ 15 ರಷ್ಟು ಪದವೀಧರರು ಮಾತ್ರ ‘ವಿದೇಶಿ ವೈದ್ಯಕೀಯ ಪದವೀಧರರ ಪರೀಕ್ಷೆ’ (ಎಫ್‌ಎಂಜಿಇ) ತೇರ್ಗಡೆಯಾಗುತ್ತಾರೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.

Also Read  ಜೀವನದಲ್ಲಿ ಪ್ರೀತಿ ಪ್ರೇಮ, ವ್ಯಾಪಾರ,ಮದುವೆ, ಅಡೆತಡೆಗಳಿಂದ ಮುಕ್ತಿ ಪಡೆಯಲು ಇದನ್ನು ಒಮ್ಮೆ ಪಾಲಿಸಿರಿ ಸಾಕು

ವಿದೇಶದಲ್ಲಿ ವೈದ್ಯಕೀಯ ಪದವಿ ಪಡೆಯುವ ವಿದ್ಯಾರ್ಥಿಗಳು ಭಾರತದಲ್ಲಿ ವೈದ್ಯಕೀಯ ವೃತ್ತಿ ನಡೆಸಬೇಕಿದ್ದರೆ ಎಫ್‌ಎಂಜಿಇ ಪಾಸಾಗಬೇಕಿದೆ. ತೇರ್ಗಡೆಯಾಗದ ವಿದ್ಯಾರ್ಥಿಗಳು ಕಾನೂನುಬಾಹಿರವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದು ಇದು ಅಪಾಯಕಾರಿಯಾಗಿದೆ. ಆದ್ದರಿಂದ ಸಮರ್ಥ ವಿದ್ಯಾರ್ಥಿಗಳು ಮಾತ್ರ ವಿದೇಶಕ್ಕೆ ವೈದ್ಯಕೀಯ ಅಧ್ಯಯನಕ್ಕೆ ತೆರಳಬೇಕು ಎಂಬುದು ಸರಕಾರದ ಉದ್ದೇಶವಾಗಿದೆ ಎಂದವರು ತಿಳಿಸಿದ್ದಾರೆ.

error: Content is protected !!
Scroll to Top