(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರವು ಜನವರಿ 16ರಿಂದ ಎಂಡೋಸಲ್ಫಾನ್ ಸಂತ್ರಸ್ತರು ಹೆಚ್ಚಾಗಿರುವಂತಹ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ.
ಜ.16 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆಯಲಿದೆ. ಜ. 17 ರಂದು, ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಜ. 20ಕ್ಕೆ ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.