ಬಿಗ್ ಬಾಸ್ ನಲ್ಲಿ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ಬೋಳಿಸಿದ ಕಡಬದ ಯುವಕ

(ನ್ಯೂಸ್ ಕಡಬ) newskadaba.com ಕಡಬ, ಜ.29. ಬಿಗ್ ಬಾಸ್ ಸೀಸನ್ 10 ರಲ್ಲಿ ಡ್ರೋಣ್ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ತೆಗೆದು ಕಡಬದ ಯುವಕನೋರ್ವ ಇದೀಗ ವೈರಲ್ ಆಗಿದ್ದಾನೆ.

ಕಡಬ ತಾಲೂಕಿನ ಬಂಟ್ರ ಗ್ರಾಮದ ಪಾಲೆತ್ತಡ್ಕ ನಿವಾಸಿ ಝೈನುಲ್ ಆಬಿದ್ ಎಂಬಾತ ಈ ಸಲದ ಬಿಗ್ ಬಾಸ್ ಸೀಸನ್ ನಲ್ಲಿ ಡ್ರೋಣ್ ಪ್ರತಾಪ್ ವಿನ್ನರ್ ಆಗಿ ಹೊರಬರಲಿದ್ದು, ಪ್ರತಾಪ್ ಸೋತರೆ ಅರ್ಧ ಗಡ್ಡ, ಮೀಸೆ ತೆಗೆಯುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚಾಲೆಂಜ್ ಹಾಕಿದ್ದ. ಅಲ್ಲದೆ ಹಸಿ ಮೆಣಸಿನಕಾಯಿ ತಿನ್ನುವುದಾಗಿ ಮತ್ತೊಂದು ವೀಡಿಯೋ ಹರಿಯಬಿಟ್ಟಿದ್ದ. ಇದೀಗ ಕಾರ್ತಿಕ್ ವಿನ್ನರ್ ಆಗಿ ಹೊರ ಬಂದಿದ್ದು, ಪ್ರತಾಪ್ ರನ್ನರ್ ಅಪ್ ಗೆ ಸಮಾಧಾನ ಪಟ್ಟುಕೊಂಡಿದ್ದಾರೆ. ಫಲಿತಾಂಶ ಹೊರ ಬರುತ್ತಲೇ ಆಬಿದ್ ಅರ್ಧ ಗಡ್ಡ ಮೀಸೆ ಬೋಳಿಸಿಕೊಂಡು ಹಸಿ ಮೆಣಸಿನಕಾಯಿ ತಿಂದು ವೀಡಿಯೋ ಮಾಡಿ ಅಪ್ಲೋಡ್ ಮಾಡಿದ್ದಾನೆ. ಇದೀಗ ವೀಡಿಯೋ ವೈರಲ್ ಆಗಿದೆ.

Also Read  ಈ 9 ರಾಶಿಯವರಿಗೆ ಅದೃಷ್ಟವೋ ಅದೃಷ್ಟ. ರಾಜಯೋಗ ಶುರು

error: Content is protected !!
Scroll to Top