ಪಾದಚಾರಿಗಳಿಗೆ ಲಾರಿ ಢಿಕ್ಕಿ – ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ.04. ಚಾಲಕನ ಅಜಾಗರೂಕತೆಯಿಂದಾಗಿ ಪಾದಚಾರಿಗಳಿಬ್ಬರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಾನುವಾರು ಬೆಳ್ತಂಗಡಿ ತಾಲೂಕಿನ ಉಜಿರೆಯ ಎರ್ನೋಡಿ ಕ್ರಾಸ್‌ ನಡೆದಿದೆ.

ಲಾರಿ ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷದ ಚಾಲನೆಯಿಂದಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸರ ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ಧರೆಗುರುಳಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಮೃತಪಟ್ಟ ಓರ್ವ ಪುರುಷ ಮತ್ತೋರ್ವ ಮಹಿಳೆ ಬಸ್ಸಿಗಾಗಿ ರಸ್ತೆ ಬದಿ ನಿಂತಿದ್ದ ವೇಳೆ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Scroll to Top