(ನ್ಯೂಸ್ ಕಡಬ) newskadaba.com ಹೈದರಾಬಾದ್, ಫೆ. 12. ಇಲ್ಲಿನ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯತ್ತಿದ್ದ ರೋಗಿಯೋರ್ವರಿಗೆ ಇಲಿ ಕಚ್ಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ರೋಗಿಯ ಬಲಗೈ ಬೆರಳುಗಳು ಹಾಗೂ ಹಿಮ್ಮಡಿಗಳನ್ನು ಇಲಿ ಕಚ್ಚಿರುವುದಾಗಿ ಮೂಲಗಳು ತಿಳಿಸಿವೆ. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಈ ರೋಗಿಯನ್ನು ಬಳಿಕ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ಹಿರಿಯ ಆರೋಗ್ಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ, ರೋಗಿಯನ್ನು ವಿಚಾರಿಸಿದ್ದಾರೆ ಎನ್ನಲಾಗಿದೆ. ಇದರ ಜತೆಗೆ ಲೋಪಗಳಿಗೆ ಕಾರಣರಾದ ಸಿಬ್ಬಂದಿಗೆ ನೋಟಿಸ್ ನ ನೋಟಿಸ್ ನೀಡಲಾಗಿದ್ದು, ಶಿಸ್ತುಕ್ರಮವನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಐಸಿಯು ಘಟಕದ ಪಕ್ಕದ ಡಯಾಲಿಸಿಸ್ ಘಟಕವನ್ನು ನವೀಕರಿಸಲಾಗುತ್ತಿದ್ದು, ಈ ಕಾಮಗಾರಿಯ ವೇಳೆ ಇಲಿಗಳು ಐಸಿಯು ಪ್ರವೇಶಿಸಿವೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.