ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿ ಮೃತ್ಯು.!



(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 12. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವ ಘಟನೆ ಸೋಮವಾರದಂದು ವರದಿಯಾಗಿದೆ.







ಮೃತ ವಿದ್ಯಾರ್ಥಿನಿಯನ್ನು ಧರ್ಮಸ್ಥಳ ಗ್ರಾಮದ ಪಿಜತ್ತಡ್ಕದ ನಿವಾಸಿ ಕಿಶೋರ್ ಎಂಬವರ ಪುತ್ರಿ ತ್ರಿಶಾ(16) ಎಂದು ಗುರುತಿಸಲಾಗಿದೆ. ಈಕೆ ಫೆ. 07ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು ಎನ್ನಲಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ತ್ರಿಶಾ ಸೋಮವಾರ ಮುಂಜಾನೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top