ಫೆ. 26 ಹಾಗೂ 27ರಂದು ಬೃಹತ್ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 14. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಫೆ. 26 ಹಾಗೂ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.

ಈ ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ಎಲ್ಲಾ ವಲಯಗಳಿಂದ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ಮಧ್ಯಮ/ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸಲಿದೆ. ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಮತ್ತು ಇತರೆ ವಿದ್ಯಾರ್ಹತೆಯುಳ್ಳ ರಾಜ್ಯದ ಯುವಜನತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ನಿರುದ್ಯೋಗಿ ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆಯಬಹುದು.

ನೋಂದಾವಣಿ ಹಂತಗಳು:

https://skillconnect.kaushalkar.com/ಗೆ ಭೇಟಿ ನೀಡಿ, ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಬೇಕು, ನಂತರ ಉದ್ಯೋಗ ಮೇಳ ಮೇಲೆ ಕ್ಲಿಕ್ ಮಾಡಿ ಅಭ್ಯರ್ಥಿ ನೋಂದಣಿ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 99185991800 (ವಿಸ್ತರಣಾ ಸಂಖ್ಯೆ 4)ನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group