ವಾಹನಗಳ ಬ್ಯಾಟರಿ ಕಳವು ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ವಾಹನಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಿರುವ ಕೊಣಾಜೆ ಪೊಲೀಸರು 3.90 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ.


ಬಂಧಿತ ಆರೋಪಿಯನ್ನು ರಿಯಾಝ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಒಟ್ಟು 3,90,000 ರೂ. ಮೌಲ್ಯದ ಕಳವುಗೈದ ಬ್ಯಾಟರಿಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Scroll to Top