ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 15. ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆತ್ಮತ್ಯೆ ಮಾಡಿಕೊಡ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ. ಸುಮಾರು ಒಂದೂವರೆ ತಿಂಗಳಿನಿಂದ ಕಾಲೇಜಿಗೆ ಹೋಗದೇ ಮನೆಯಲ್ಲೇ ಇದ್ದ ಅತ್ತಾವುಲ್ಲಾ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದನು ಎನ್ನಲಾಗಿದೆ. ಬುಧವಾರ ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದು, ಮರಳಿ ಮನೆಗೆ ಬಂದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂದುಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಯುಡಿಆರ್ ನಂಬ್ರ 03/2024 ಕಲಂ:174 CRPC ರಂತೆ ಪ್ರಕರಣ ದಾಖಲಾಗಿದೆ.

Also Read  ಪಂಜ ವಲಯ ಕಾಂಗ್ರೆಸ್ ಮತ್ತು ದಾನಿಗಳಿಂದ ಸಂಗ್ರಹಿಸಿದ ಹಣ ಹಸ್ತಾಂತರ

error: Content is protected !!
Scroll to Top