ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸೈಯದ್ ಸಾದಾತ್ ತಂಙಳ್ ಕರ್ವೇಲ್ ನಿಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 16. ಎರಡು ವಾರಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಧಾರ್ಮಿಕ ವಿದ್ವಾಂಸ ಸೈಯದ್ ಸಾದಾತ್ ಅಲಿ ತಂಙಳ್ ಕರ್ವೇಲುರವರು ಶುಕ್ರವಾರದಂದು ಬೆಳ್ಳಂಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

 

ಫೆ. 05ರಂದು ಸಾದಾತ್ ಅಲಿ ತಂಙಳ್ ಸಂಚರಿಸುತ್ತಿದ್ದ ಆಟೋ ರಿಕ್ಷಾವು ಪುತ್ತೂರು ತಾಲೂಕು ಬೆಳ್ಳಿಪ್ಪಾಡಿ ಗ್ರಾಮದ ಶಾಂತಿನಗರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿತ್ತು. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಸಾದಾತ್ ಅಲಿ ತಂಙಳ್ ರಿಗೆ ಗಂಭೀರ ಗಾಯಗಳಾಗಿತ್ತು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಇಂದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Also Read  ಕಂಬಳದ 'ಹೀರೋ' ಶ್ರೀನಿವಾಸ ಗೌಡರನ್ನು ಸನ್ಮಾನಿಸಿದ ಯಡಿಯೂರಪ್ಪ

error: Content is protected !!
Scroll to Top