ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 16. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ.


ದಾವಣಗೆರೆಯಲ್ಲಿ ಇದೇ ಫೆಬ್ರವರಿ 3 ಮತ್ತು 4 ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಧನ್ಯವಾದ ಸಲ್ಲಿಸಿದ್ದಾರೆ. ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಸ್ಮರಿಸಿ ಅಭಿನಂದಿಸಿದೆ. ಬಜೆಟ್ ನಲ್ಲಿ ಘೋಷಣೆ ಮಾಡಿರುವ ಬಸ್ ಪಾಸ್ ಯೋಜನೆಯನ್ನು ಕ್ರಮಬದ್ದವಾಗಿ ಕೂಡಲೇ ಜಾರಿಗೆ ತರಲು ವಾರ್ತಾ ಇಲಾಖೆ ಮುಂದಾಗಬೇಕು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಿನಂತಿಸಿದ್ದಾರೆ.

Also Read  ಬಂಟ್ವಾಳ: ತುಳು ಲಿಪಿ ನಾಮಫಲಕ ಅನಾವರಣ

error: Content is protected !!
Scroll to Top