ಫೆಬ್ರವರಿ 19 ರಂದು ಛತ್ರಪತಿ ಶಿವಾಜಿ ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 19 ರಂದು ಬೆಳಿಗ್ಗೆ 10.30ಕ್ಕೆ ಕುದ್ಮುಲ್ ರಂಗರಾವ್ ಪುರಭವನದ ಮಿನಿ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಜಯಂತಿ ಹಮ್ಮಿಕೊಳ್ಳಲಾಗಿದೆ.

ವಿಧಾನಸಭೆಯ ಸಭಾಪತಿಗಳಾದ ಯು.ಟಿ ಖಾದರ್ ಅವರ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ಎಸ್. ತಂಗಡಗಿ, ವಿಧಾನ ಪರಿಷತ್ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಗೌರವ ಉಪಸ್ಥಿತಿ ವಹಿಸುವರು.

Also Read  ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪೂರ್ಣಾನಂದ ಕಡಬ

error: Content is protected !!
Scroll to Top