ಪಿಎಚ್‍.ಡಿ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಫೀಲ್ಡ್ ಮಾರ್ಷಲ್ ಕೆಎಮ್ ಕಾರ್ಯಪ್ಪ ಕಾಲೇಜು ಮಡಿಕೇರಿ ಮತ್ತು ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ ಕುಶಾಲನಗರ ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿ.ಎಚ್.ಡಿ ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಕುಲಸಚಿವರು ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಗಂಗೋತ್ರಿ-574199 ಅಥವಾ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಮಂಗಳೂರು. ಇವರಿಂದ ರೂ. 1,100/-ಗಳು ( ಎಸ್‍ಸಿ /ಎಸ್‍ಟಿ ಪ್ರವರ್ಗ1 ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ ರೂಪಾಯಿ 550) ಚಲನ್ / ರಾಷ್ಟ್ರೀಕೃತ ಬ್ಯಾಂಕಿನಿಂದ ಹಣಕಾಸು ಅಧಿಕಾರಿ ಮಂಗಳೂರು ವಿಶ್ವವಿದ್ಯಾನಿಲಯ ಇವರ ಹೆಸರಿನಲ್ಲಿ ಪಡೆದ ಡಿಡಿ ಮುಖಾಂತರ ಪಾವತಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು / ಮಾನ್ಯತೆ ಪಡೆದ ಸಂಶೋಧನಾ ಕೇಂದ್ರದ ಮುಖ್ಯಸ್ಥರಿಗೆ  ಮಾರ್ಚ್ 5ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ಪರಿಶೀಲಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭವಾದ ಮದ್ಯದಂಗಡಿ ► ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ

error: Content is protected !!
Scroll to Top