(ನ್ಯೂಸ್ ಕಡಬ)newskadaba.com ಹಾವೇರಿ, ಫೆ.18 ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಆಶಾ ಕಿರಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಹಾವೇರಿ ನಗರದ ಕೊಳ್ಳಿ ಕಾಲೇಜು ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಶಾಕಿರಣ ಯೋಜನೆಯಡಿ ಸಿದ್ದರಾಮಯ್ಯ ಅವರು ನೇತ್ರ ಸಮಸ್ಯೆವುಳ್ಳ ಮಕ್ಕಳಿಗೆ ಕನ್ನಡಕ ವಿತರಿಸಿದರು.
ಕಣ್ಣಿನ ಸಮಸ್ಯೆ ಇರುವವರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಯೋಜನೆ ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಚಿಂತಿಸಿದೆ.
ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಿದ್ದರಾಮಯ್ಯ, ಕಣ್ಣಿನ ದೋಷ ಇರುವವರಿಗೆ ದೋಷ ಸರಿಪಡಿಸಲು ಆಶಾ ಕಿರಣ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿದ್ದೇವೆ. ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ಹಾವೇರಿ ಜಿಲ್ಲೆಗೆ 1400 ಕೋಟಿ ರೂಪಾಯಿ ಹಣ ಗ್ಯಾರಂಟಿ ಯೋಜನೆಗಳಿಗೆ ಕೊಟ್ಟಿದ್ದೇವೆ. ಇದೊಂದೇ ಜಿಲ್ಲೆಗೆ 1400 ಕೋಟಿ ಹಣ ಕೊಟ್ಟಿದ್ದೇವೆ. ಬಜೆಟ್ನಲ್ಲಿ 52000 ಕೋಟಿ ರೂಪಾಯಿ ಹಣ ಗ್ಯಾರಂಟಿಗಾಗಿ ಘೋಷಣೆ ಮಾಡಿದ್ದೇನೆ ಎಂದರು.
ಇನ್ನು ವಿರೋಧ ಪಕ್ಷದವರು ಸುಳ್ಳು ಹೇಳಿದರೆ ದಾರಿ ತಪ್ಪಿಸಿದರೆ ಅದಕ್ಕೆ ನೀವೇ ಉತ್ತರ ಕೊಡಬೇಕು. ಅವರಿಗೆ ಅಧಿಕಾರದಲ್ಲಿದ್ದಾಗ ಮಾಡೋಕಾಗಲಿಲ್ಲ, ಕೋಮುವಾದದ ವಿಷ ಬೀಜ ಬಿತ್ತಿ, ಧರ್ಮ ಧರ್ಮಗಳ ನಡುವೆ ಸಂಘರ್ಷ ಮಾಡಿಸಿ ಸಮಾಜದ ಶಾಂತಿ ಹಾಳು ಮಾಡಿದವರಿಂದ ಈ ದೇಶದ ಸಾಮಾಜಿಕ ಪರಿಸ್ಥಿತಿ ಬದಲಾವಣೆ ಆಗಲು ಸಾಧ್ಯವಿಲ್ಲ ಎಂದರು.