ಹೃದಯಾಘಾತ- ಕೇರಳದ ಯುವಕ ಸೌದಿಯಲ್ಲಿ ನಿಧನ

(ನ್ಯೂಸ್ ಕಡಬ) newskadaba.com ರಿಯಾದ್, ಫೆ. 20. ಸ್ನೇಹಿತರೊಂದಿಗೆ ಫುಟ್ಬಾಲ್ ಆಟವಾಡಿ ವಿಶ್ರಾಂತಿ ತೆಗೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಕೇರಳ ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮಕ್ಕಾದಲ್ಲಿ ಸಂಭವಿಸಿದೆ.

ಮೃತ ಯುವಕನನ್ನು ಮಕ್ಕಾದಲ್ಲಿ ಗೃಹ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕೇರಳ ಮಲಪ್ಪುರಂ ಮೂಲದ ನೌಫಲ್ ಎಂದು ಗುರುತಿಸಲಾಗಿದೆ. ಮೃತ ನೌಫಲ್ ನವಾರಿಯಾದ ಮನೆಯೊಂದರಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಬೆಳಗ್ಗೆ ಸ್ನೇಹಿತರೊಂದಿಗೆ ಫುಟ್ ಬಾಲ್ ಆಡಿದ ಬಳಿಕ ವಿಶ್ರಾಂತಿ ಪಡೆಯುತ್ತಿದ್ದಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

Scroll to Top