ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೈಂದೂರು, ಫೆ. 20. ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಬಡಾಕೆರೆ ಎಂಬಲ್ಲಿ ಸೋಮವಾರದಂದು ರಾತ್ರಿ ವೇಳೆ ನಡೆದಿದೆ.


ಮೃತರನ್ನು ಬಡಾಕೆರೆಯ ವಿಜಯ ಪೂಜಾರಿ(60) ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ನಿರ್ಮಾಣ ಹಂತದಲ್ಲಿದ್ದ 35 ಅಡಿ ಆಳದ ನೀರಿಲ್ಲದ ಬಾವಿಗೆ ಅಕಸ್ಮಿಕವಾಗಿ ಬಿದ್ದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಸಾಮಾಜಿಕ ಕಾರ್ಯಕರ್ತ ಸುರೇಶ್ ಖಾರ್ವಿ ಕೊಡೇರಿ, ಗಂಗೊಳ್ಳಿ 24×7 ಅಂಬ್ಯುಲೆನ್ಸ್ ತಂಡದ ಇಬ್ರಾಹಿಂ ಗಂಗೊಳ್ಳಿ, ಬಾಬ್ಬ, ಅಬರಾರ್, ಕೃಷ್ಣ, ಭರತ್ ಹರಿಕಾಂತ ಹಾಗೂ ಆದಿಲ್ ಅವರು ಮೃತದೇಹವನ್ನೆತ್ತಲು ಸಹಕರಿಸಿದರು. ಸ್ಥಳಕ್ಕೆ ಬೈಂದೂರು ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಮಳೆಗೆ ಕುಸಿದ ಕಳಾರ ಶಾಲೆಗೆ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ಭೇಟಿ

error: Content is protected !!
Scroll to Top