ಮಾರ್ಚ್ 03ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಮಾರ್ಚ್ 3ರಂದು ಪಲ್ಸ್ ಪೋಲಿಯೋ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ನಗರದ ಮಿನಿ ವಿಧಾನಸೌಧದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮಾರ್ಚ್ 3ರಂದು ಪಲ್ಸ್ ಪೊಲಿಯೋ ದಿನಾಚರಣೆಯನ್ನು ಆಚರಿಸುತ್ತಿದ್ದು,  ಹೆಚ್ಚಾಗಿ ನಗರ ಪ್ರದೇಶದಲ್ಲಿ ಯಾವೆಲ್ಲ ಪ್ರದೇಶದಲ್ಲಿ ಪೋಲಿಯೋ ಲಸಿಕೆಯನ್ನು ತೆಗೆದುಕೊಳ್ಳದೇ ಇರುವವರು ಇದ್ದಾರೆ ಎಂಬ ಬಗ್ಗೆ ಸಮೀಕ್ಷೆಯನ್ನು ನಡೆಸಿ,  ಎಲ್ಲರಿಗೂ ಲಸಿಕೆಯನ್ನು ನೀಡುವಂತಾಗಬೇಕು. ಎಲ್ಲಾ ಇಲಾಖೆಯವರು ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಕೈಜೋಡಿಸಬೇಕು ಎಂದರು.

Also Read  ಮಂಗಳೂರು: ಇಂದು ಹಳೆ ಬಂದರ್ ನಿಂದ ಮಾಲ್ದೀವ್ಸ್ ಗೆ ಪ್ರಥಮ ಸರಕು ನೌಕೆ ಯಾನ

error: Content is protected !!
Scroll to Top