ಎಲ್ಲಾ ಶಾಲೆಗಳಲ್ಲಿ ‘ನಾಡಗೀತೆ’ ಹಾಡುವುದು ಕಡ್ಡಾಯ – ತಿದ್ದುಪಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದದ ಬೆನ್ನಲ್ಲೇ ಇದೀಗ ತಿದ್ದುಪಡಿ ಆದೇಶವನ್ನು ಹೊರಡಿಸಿದೆ.

ಜ್ಞಾನಪೀಠ ಪುರಸ್ಕೃತ ರಾಷ್ಟ್ರಕವಿ ಡಾ. ಕುವೆಂಪುರವರ “ಜಯ ಭಾರತ ಜನನಿಯ ತನುಜಾತೆ” ಕವನವನ್ನು ನಾಡಗೀತೆಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07.01.2004ರ ಆದೇಶ ಭಾಗದಲ್ಲಿನ ಮಾರ್ಗಸೂಚಿ ‘ಇ” ಅಂಶಕ್ಕೆ ಹೊರಡಿಸಲಾದ ತಿದ್ದುಪಡಿ ಆದೇಶವನ್ನು ಹಿಂಪಡೆಯಲಾಗಿದೆ. ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ನಾಡಗೀತೆಯನ್ನು ಹಾಡುವುದು” ಎಂಬುವುದರ ಬದಲಾಗಿ “(ಇ) ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂದು ತಿದ್ದಿ ಓದುವಂತೆ ಆದೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Also Read  ತನ್ನ ಪತ್ನಿ ಮತ್ತು ಮಗಳಿಗೆ ಕೊರೋನಾ ಸೋಂಕು ದೃಢ..!!! ➤ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಟ್ವೀಟ್

 

error: Content is protected !!
Scroll to Top