ಸಂವಿಧಾನ ಜಾಥಾ- ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಪುತ್ತೂರು ತಾಲೂಕು ಸಮಾಜ ಕಲ್ಯಾಣ ಇಲಾಖೆ, ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಕೌಕ್ರಾಡಿ ಗ್ರಾಮ ಪಂಚಾಯತ್ ಗೆ ಬುಧವಾರ ಬೆಳಗ್ಗೆ ಆಗಮಿಸಿತು. ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಅಂಬೇಡ್ಕರ್ ಪುತ್ತಳಿಗೆ ಹಾರಾರ್ಪಣೆ ಮಾಡಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಬ್ಯಾಂಡ್ ಸೆಟ್ ಮೂಲಕ ಶಾಲಾ ವಿಧ್ಯಾರ್ಥಿಗಳಿಂದ ಹಾಗೂ ಸಾರ್ವಜನಿಕರಿಂದ ಕೌಕ್ರಾಡಿ ಜಂಕ್ಷನ್ ನಿಂದ ಗ್ರಾಮ ಪಂಚಾಯತ್‍ಗೆ ಕಾಲ್ನಡಿಗೆ ಜಾಥಾ ಸಾಗಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಡಾ.ಬಿ.ಆರ್.ಅಂಬೇಡ್ಕರ್ ಪುತ್ತಳಿಗೆ ಹಾರಾರ್ಪಣೆ ಮಾಡಿದರು. ಸಮಾಜ ಕಲ್ಯಾಣ ಇಲಾಖೆಯ ಕಛೇರಿಯ ಅಧೀಕ್ಷಕರು ಪ್ರಸ್ತಾವಿಕ ಭಾಷಣ ಮಾಡಿದರು. ನಂತರ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ಸಂವಿಧಾನ ಪೀಠಿಕೆ, ಪಠಣ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಶಿರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉದನೆಗೆ ಬುಧವಾರ ಆಗಮಿಸಿತು. ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಗೆ ಬುಧವಾರ ಮಧ್ಯಾಹ್ನ ಆಗಮಿಸಿತು. ಅಂಬೇಡ್ಕರ್ ಪುತ್ತಳಿಗೆ ಹಾರಾರ್ಪಣೆ ಮಾಡಿ ಜಾಥಾಕ್ಕೆ ಚಾಲನೆ ನೀಡಿದರು. ನೋಡಲ್ ಅಧಿಕಾರಿಗಳು, ಬ್ಯಾಂಡ್ ಸೆಟ್ ಮೂಲಕ ಶಾಲಾ ವಿಧ್ಯಾರ್ಥಿಗಳಿಂದ ಹಾಗೂ ಸಾರ್ವಜನಿಕರಿಂದ ಸುಬ್ರಹ್ಮಣ್ಯ ಜಂಕ್ಷನ್‍ ನಿಂದ ಗ್ರಾಮ ಪಂಚಾಯತ್‍ಗೆ ಕಾಲ್ನಡಿಗೆ ಜಾಥಾ ಸಾಗಿತು. ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ ಹಾಗೂ ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಸಂಯುಕ್ತ ಆಶ್ರಯದಲ್ಲಿ ಅಂಬೇಡ್ಕರ್ ಪುತ್ತಳಿ ಸ್ತಬ್ದ ಚಿತ್ರದ ಸಂವಿಧಾನ ಜಾಗೃತಿ ಜಾಥವು ಸುಳ್ಯ ತಾಲೂಕಿನ ಮೆಮೋರಿಯಲ್ ಕಾಲೇಜು ಸುಳ್ಯ ಬುಧವಾರ ಆಗಮಿಸಿತು. ಕಾಲೇಜು ಪ್ರಾಂಶುಪಾಲರು, ಕೆವಿಜಿ ವಿದ್ಯಾ ಸಮೂಹ ಸಂಸ್ಥೆಗಳ ಎಲ್ಲಾ ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಶಿಕ್ಷಕರು, ಎಲ್ಲಾ ವಿದ್ಯಾರ್ಥಿಗಳು, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿ ಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಒಳಗೊಂಡ ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರವನ್ನು ಪ್ರದರ್ಶಿಸಲಾಯಿತು. ನಾಗರೀಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯನ್ನೊಳಗೊಂಡ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು.

error: Content is protected !!

Join the Group

Join WhatsApp Group