(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ಮಾರ್ಚ್ 01ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಶೈಕ್ಷಣಿಕ ವರ್ಷದಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದೆ. 2023-24ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ನಡೆಯಲಿದ್ದು, ಈ ಹಿನ್ನೆಲೆ ವಿದ್ಯಾಥಿಗಳ ಅನುಕೂಲಕ್ಕಾಗಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ವೋಲ್ವೋ ಎಸಿ ಬಸ್ ಹೊರತುಪಡಿಸಿ KSRTC ಹಾಗೂ BMTC ಬಸ್ ಗಳಲ್ಲಿ ಹಾಲ್ ಟಿಕೆಟ್ ತೋರಿಸಿ ಮನೆಯಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.