ಎಂಡಿಎಂಎ ಮಾದಕವಸ್ತು ಮಾರಾಟ – ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ ಕುರಿತು ವರದಿಯಾಗಿದೆ.

ಬಂಧಿತ ಆರೋಪಿಯನ್ನು ಮೊಹಮ್ಮದ್ ರಿಜ್ವಾನ್(34) ಎಂದು ಗುರುತಿಸಲಾಗಿದೆ. ಈತ ಶುಕ್ರವಾರದಂದು ಪಡುಶೆಡ್ಡೆ ಗ್ರಾಮದ ಬೊಂದೇಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೇ ಟ್ರ್ಯಾಕ್ ನ ಅಂಡರ್ ಪಾಸ್ ಬಳಿಯಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತನಿಂದ ಒಟ್ಟು 91,280 ರೂ. ಮೌಲ್ಯದ 15 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾವನ್ನು ವಶಕ್ಕೆ ಪಡೆಯಲಾಗಿದೆ.ಈತನ ಮೇಲೆ ಈ ಹಿಂದೆ ಮಂಗಳೂರು ನಗರದ ಕಾವೂರು, ಮಂಗಳೂರು ಗ್ರಾಮಾಂತರ, ಕೊಣಾಜೆ ಪೊಲೀಸ್ ಠಾಣೆ ಹಾಗೂ ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣೆಗಳಲ್ಲಿ ಕೊಲೆ, ದರೋಡೆ, ಹಲ್ಲೆ, ಮಾದಕ ವಸ್ತು ಸೇವನೆ ಪ್ರಕರಣಗಳು ದಾಖಲಾಗಿರುವುದಾಗಿ ತಿಳಿದುಬಂದಿದೆ.

Also Read  ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..!

error: Content is protected !!
Scroll to Top