ಬೈಕ್ ಸ್ಕಿಡ್ – ಸವಾರ ಮೃತ್ಯು, ಸಹಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 24. ಬೈಕ್ ಸ್ಕಿಡ್ ಆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ.

ಮೃತರನ್ನು ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಎಂದು ಗುರುತಿಸಲಾಗಿದೆ. ಈತ ನಿಟ್ಟೆಯ ಖಾಸಗಿ ಕಾಲೇಜಿನಲ್ಲಿ ಮೆಕ್ಯಾನಿಕ್ ಇಂಜಿನಿಯರಿಂಗ್ ಓದುತಿದ್ದ ಇವರು ಕಾಲೇಜಿನಲ್ಲಿ ವಾರ್ಷಿಕೋತ್ಸವ ಇದ್ದ ಕಾರಣ ಸ್ನೇಹಿತರೊಂದಿಗೆ ಪ್ರತ್ಯೇಕ ಬೈಕ್‌ಗಳಲ್ಲಿ ತೆರಳುತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

Scroll to Top