(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಕಳೆದ 29 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.
ಬಂಧಿತ ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ಮಾದಾಪುರದ ಈರಪ್ಪ ಎಂದು ಗುರುತಿಸಲಾಗಿದೆ. ಈತ ಹಳೆಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯಾಗಿದ್ದು, 29 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ ಕದ್ರಿ ಠಾಣೆಯ ಎಸ್ಸೈ ಉಮೇಶ್ ಕುಮಾರ್ ನೇತೃತ್ವದ ತಂಡವು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.