ರಸ್ತೆಬದಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 24. ಕಳೆದ ವಾರ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾರೊಂದರಲ್ಲಿ ತಲವಾರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ನಾಲ್ವರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪುತ್ತೂರು ನರಗ ಠಾಣಾ ನಿರೀಕ್ಷಕ ಸತೀಶ್ ಜಿ.ಜೆ ಅವರು ಸಿಬ್ಬಂದಿಗಳೊಂದಿಗೆ ವಾಹನ ತಪಾಸಣಾ ನಿರತರಾಗಿದ್ದ ವೇಏಲ ಮುಕ್ರಂಪಾಡಿ ಜಂಕ್ಷನ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ತಲವಾರು ಪತ್ತೆಯಾಗಿತ್ತು. ಈ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಕಾರಿನಲ್ಲಿದ್ದ ಕಿಶೋರ್, ಮನೋಜ್, ಆಶಿಕ್ ಮತ್ತು ಸನತ್ ಎಂಬ ನಾಲ್ವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಬಂಧನದಲ್ಲಿದ್ದ ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ. ಆರೋಪಿಗಳ ಪರ ವಕೀಲರಾದ ಮಾಧವ ಪೂಜಾರಿ, ರಾಕೇಶ್ ಬಲ್ನಾಡು ಹಾಗೂ ಮೋಹಿನಿ ವಾದಿಸಿದ್ದರು.

Also Read  ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಇಳಿಕೆ

error: Content is protected !!
Scroll to Top