ಲಾರಿ ಢಿಕ್ಕಿ- ಯುವಕ ಮೃತ್ಯು

(ನ್ಯೂಸ್ ಕಡಬ) neskadaba.com ಬಂಟ್ವಾಳ, ಫೆ. 26. ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು – ಆಲಡ್ಕದಲ್ಲಿ ವಾಸವಾಗಿದ್ದ ಅಶ್ರಫ್ (32) ಎಂದು ಗುರುತಿಸಲಾಗಿದೆ. ಅಶ್ರಫ್, ಸ್ನೇಹಿತ ಆಲಡ್ಕ ನಿವಾಸಿ ತನ್ವೀರ್ ಎಂಬವರನ್ನು ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡ್ ಕೈಕಂಬದಲ್ಲಿರುವ ಅಂಗಡಿಗೆ ಬಿಡಲೆಂದು ತೆರಳಿದ್ದು, ಇನ್ನೇನು ಆತನನ್ನು ಸ್ಕೂಟರ್ ನಿಂದ ಇಳಿಸಬೇಕು ಅನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಹಿಂದಿರುಗುತ್ತಿದ್ದ ಲಾರಿಯನ್ನು ಅದರ ಚಾಲಕ ಅಜಾಗರೂಕತೆಯಿಂದ ಹಿಂಬದಿಗೆ ಚಲಿಸಿ ಸ್ಕೂಟರ್ ಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಸ್ಥಳೀಯರು ಆರೋಪಿದ್ದಾರೆ. ಘಟನೆಯಿಂದ ಇಬ್ಬರಿಗೂ ಗಾಯಗಳಾಗಿದ್ದು, ಗಂಭೀರ ಗಾಯಗೊಂಡಿದ್ದ ಅಶ್ರಫ್ ರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಗುತ್ತಿಗೆ ಆಧಾರದಲ್ಲಿ ಕೆಎಸ್ಸಾರ್ಟಿಸಿ ಚಾಲಕರ ನೇರ ನೇಮಕಾತಿ - ದ.ಕ, ಉಡುಪಿ ಜಿಲ್ಲೆಯವರಿಗೆ ಅವಕಾಶ

error: Content is protected !!
Scroll to Top