ಕೆಮ್ಮಾರ: ಓವರ್ ಟೇಕ್ ವಿಚಾರದಲ್ಲಿ ಗಲಾಟೆ ► ಮೂವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಉಪ್ಪಿನಂಗಡಿ ಪೊಲೀಸರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.14. ಓವರ್ ಟೇಕ್ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಶಾಂತಿ ಭಂಗ ಉಂಟಾದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಘಟನೆ ಉಪ್ಪಿನಂಗಡಿಯ ಕೆಮ್ಮಾರ ಎಂಬಲ್ಲಿ ಮಂಗಳವಾರದಂದು ನಡೆದಿದೆ.

ಸೋಮವಾರ ರಾತ್ರಿ ಕೆಮ್ಮಾರದಲ್ಲಿ ಓವರ್ ಟೇಕ್ ವಿಚಾರದಲ್ಲಿ ಮುಸ್ತಾಲಿಪ್, ಮಹಮ್ಮದ್ ಇಕ್ಬಾಲ್ ಹಾಗೂ ಶ್ರೀಶಕುಮಾರ್ ಎಂಬವರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು‌.‌ ಸ್ಥಳದಲ್ಲಿ ಎರಡೂ ಕೋಮಿನ ಯುವಕರು ಜಮಾಯಿಸಲು ತೊಡಗಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಸಾಧ್ಯತೆಯಿತ್ತು. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಉಪ್ಪಿನಂಗಡಿ ಪೊಲೀಸರು ಮೂವರನ್ನೂ ಠಾಣೆಗೆ ಕರೆದುಕೊಂಡು ಹೋಗಿದ್ದರು. ಮಂಗಳವಾರದಂದು ಆರೋಪಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಪೊಲೀಸರು ಎರಡು ಬೈಕ್ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

Also Read  ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸ್ನೇಹ ಸಮಾವೇಶ ಸಮಾರಂಭ.

error: Content is protected !!
Scroll to Top