ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟ – ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.16. ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಶನಿವಾರದಂದು ಪ್ರಕಟಿಸಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಎಪ್ರಿಲ್ 26 ರಂದು ಮೊದಲ ಹಂತ ಮತ್ತು ಮೇ 7 ರಂದು 2ನೇ ಹಂತದಲ್ಲಿ ಮತದಾನ ನಡೆಯಲಿದೆ.
ಶನಿವಾರ ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್, ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಎಪ್ರಿಲ್‌ 19 ರಂದು ಮೊದಲ ಹಂತದ ಮತದಾನ ನಡೆದರೆ, ಜೂನ್‌ 1 ರಂದು ಏಳನೇ ಹನಮತದ ಚುನಾವಣೆ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದವರು ತಿಳಿಸಿದ್ದಾರೆ.

Also Read  ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದ ಸೆಕ್ಯುರಿಟಿ ಗಾರ್ಡ್

error: Content is protected !!
Scroll to Top