ಕಡಬ: ಲೋಕಾಯುಕ್ತ ಪೊಲೀಸರಿಂದ ದಾಳಿ – ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಜಯಣ್ಣ ಅವರ ಕಡಬದ ಪಂಜ ರಸ್ತೆಯ ವಿದ್ಯಾನಗರದ ಬಾಡಿಗೆ ಮನೆ ಹಾಗೂ ಕಛೇರಿಗೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಕುಶಾಲನಗರ ನಿವಾಸಿಯಾಗಿರುವ ಬಿ.ವಿ.ಜಯಣ್ಣ, ಸೋಮವಾರಪೇಟೆ ಪಟ್ಟಣ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ಚುನಾವಣಾ ಹಿನ್ನೆಲೆಯಲ್ಲಿ ಅವರು ಕಡಬ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವಾರದ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಅಕ್ರಮ ಆಸ್ತಿ ಗಳಿಕೆಯ ಹಿನ್ನೆಲೆಯಲ್ಲಿ ಮಡಿಕೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಕುಶಾಲನಗರದ ಮನೆ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ್ದು, ಅದರಂತೆ ಕಡಬದಲ್ಲಿ ಲೋಕಾಯುಕ್ತ ಮಡಿಕೇರಿ ಇನ್ಸ್‌ಪೆಕ್ಟರ್ ಶಶಿಕುಮಾರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Also Read  ಬಿಸಿಲೆ ಘಾಟ್ ನಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ...! ➤ ಯುವತೇಜಸ್ಸು ತಂಡದಿಂದ ಬದುಕಿಸಲು ಯತ್ನ- ಆಸ್ಪತ್ರೆಗೆ ಸಾಗಿಸುವ ವೇಳೆ ವ್ಯಕ್ತಿ ಮೃತ್ಯು

error: Content is protected !!
Scroll to Top