ಪುತ್ತೂರು: ಆಲ್ಟೋ 800 – ಬೊಲೆರೋ ನಡುವೆ ಅಪಘಾತ – ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.16. ಆಲ್ಟೋ 800 ಹಾಗೂ ಮಹೀಂದ್ರಾ ಬೊಲೆರೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಕುಂಬ್ರ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.

ಮೃತರನ್ನು ಆಲ್ಟೋ ಕಾರಿನಲ್ಲಿದ್ದ ಸೋಮವಾರಪೇಟೆ ನಿವಾಸಿಗಳಾದ ಲೋಕೇಶ್ ಹಾಗೂ ರವೀಂದ್ರ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಆಲ್ಟೋ ಹಾಗೂ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೊಲೆರೋ ವಾಹನದಲ್ಲಿದ್ದವರು ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

error: Content is protected !!

Join the Group

Join WhatsApp Group