ನೇತ್ರಾವತಿ ನದಿಗೆ ಹಾರಿ ಅಪರಿಚಿತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.17. ಅಪರಿಚಿತ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಪಾಣೆಮಂಗಳೂರಿನಲ್ಲಿ ನಡೆದಿದೆ.

ನೇತ್ರಾವತಿ ನದಿಗೆ ಯುವಕ ಹಾರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅದರಂತೆ ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಯುವಕನ ಮೃತ ದೇಹದ ಹುಡುಕಾಟ ನಡೆಸಲು ವ್ಯವಸ್ಥೆ ಕಲ್ಪಿಸಿದರು. ಸ್ಥಳೀಯ ಈಜುಗಾರರ ತಂಡದ ಯುವಕರು ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಮೇಲೆತ್ತಿದ್ದಾರೆ. ಯುವಕನ ಮೃತ ದೇಹದ ಗುರುತು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದ್ದು, ಪರಿಶೀಲನೆ ಮುಂದುವರಿದಿದೆ.

Also Read  ಅರಿವು (ವಿದ್ಯಾಭ್ಯಾಸ) ಸಾಲ ಯೋಜನೆಗೆ ಅರ್ಜಿ ಆಹ್ವಾನ

error: Content is protected !!
Scroll to Top