ಅತೀ ವೇಗದಿಂದಾಗಿ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಕಾರು ► ನಂಬರ್ ಪ್ಲೇಟ್ ನೊಂದಿಗೆ ಸ್ಥಳದಿಂದ ಕಾಲ್ಕಿತ್ತ ಪ್ರಯಾಣಿಕರು



(ನ್ಯೂಸ್ ಕಡಬ) newskadaba.com ಕಾರ್ಕಳ, ಫೆ.17. ಅತೀ ವೇಗದಿಂದ ಸಾಗಿಬಂದ ಹೋಂಡಾ ಕಂಪೆನಿಯ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ಶನಿವಾರ ಬೆಳಿಗ್ಗೆ ಕಾರ್ಕಳ ಸಮೀಪದ ಕುಂಟಲ್ಪಾಡಿ ಎಂಬಲ್ಲಿ ನಡೆದಿದೆ.







ನಿಟ್ಟೆಯಿ೦ದ ಕಾಕ೯ಳಕ್ಕೆ ಬರುತ್ತಿದ್ದ ಕಾರು ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದಾಗಿ ಕಮರಿಗೆ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತವಾದ ಕೂಡಲೇ ಅದರಲ್ಲಿ ನಂಬರ್ ಪ್ಲೇಟ್ ನೊಂದಿಗೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ. ಘಟನೆಯಿಂದಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top