ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ ಓರ್ವ ಯೋಧನಿಗೆ ಗಾಯ

(ನ್ಯೂಸ್ ಕಡಬ)newskadaba.com ಜಮ್ಮು-ಕಾಶ್ಮೀರ, ಜು.23. ಮತ್ತೆ ಉಗ್ರರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದ 24 ಗಂಟೆಗಳಲ್ಲಿ ನಡೆದ 2ನೇ ಉಗ್ರರ ದಾಳಿ ಇದಾಗಿದ್ದು, ರಜೌರಿ ಸಮೀಪದಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳಿದ್ದ ಉಗ್ರರು ದಾಳಿ ನಡೆಸಿದ್ದಾರೆ. ಇನ್ನು ಭಾರತೀಯ ಸೇನೆಯು ಕಾರ್ಯಾಚರಣೆ ಮುಂದುವರೆಸಿದ್ದಾರೆ.


ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ಸೇನೆ, ಬಟ್ಟಲ್ ಸೆಕ್ಟರ್‌ನಲ್ಲಿ ಉಗ್ರರು ನುಸುಳಿದ್ದರು. ಈ ವೇಳೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದರು. ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ಉಗ್ರರು ದಾಳಿ ನಡೆಸಿದ್ದು, ಉಗ್ರರು ದಾಳಿ ನಡೆಸಿದ ಬಳಿಕ ಭದ್ರತಾ ಸಿಬ್ಬಂದಿ ಕೂಡ ಪ್ರತಿದಾಳಿ ನಡೆಸಿದ್ದರು.

Also Read  ಮಂಗಳೂರು: ವಿವಿಧ ಪ್ರಕರಣಗಳ ಆರೋಪಿ ಕ್ಯಾಲಿಕಟ್ ಏರ್ ಪೋರ್ಟ್ ನಲ್ಲಿ ಅರೆಸ್ಟ್

error: Content is protected !!
Scroll to Top