ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳ ವಲಯ ಗುರುತಿಸುವುದು ಹಾಗೂ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಲು ಬಿಬಿಎಂಪಿ ಮುಂದಾಗಿದೆ.


ಶೀಘ್ರದಲ್ಲಿಯೇ ಬೀದಿ ಬದಿ ವ್ಯಾಪಾರಿಗಳ ಪಟ್ಟಿಯನ್ನು ಸಿದ್ಧಪಡಿಸಿ ಬಿಡುಗಡೆ ಮಾಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬೀದಿ ವ್ಯಾಪಾರಿಗಳ ಸಮೀಕ್ಷೆಗಾಗಿ ಕೂಡಲೆ ಅಗತ್ಯ ಸಿಬ್ಬಂದಿ ನಿಯೋಜಿಸಿ ನಿಗದಿತ ಸಮಯದಲ್ಲಿ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

Also Read  ಶಿರಾಡಿ ಘಾಟ್ ರಸ್ತೆ ಕಾಮಗಾರಿ ಬಹುತೇಕ ಮುಕ್ತಾಯ ► ಇಂದಿನಿಂದ ಎಲ್ಲಾ ರೀತಿಯ ವಾಹನಗಳ ಸಂಚಾರ ಆರಂಭ

error: Content is protected !!
Scroll to Top