ಕುಖ್ಯಾತ ಭೂಗಳ್ಳ ಜಾನ್ ಮೋಸೆಸ್ ಬಂಧನ.!      

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24.  ನಕಲಿ ಆಸ್ತಿ ದಾಖಲೆಗಳನ್ನು ಸೃಷ್ಟಿಸಿ ನಗರದಲ್ಲಿ 100 ಕ್ಕೂ ಹೆಚ್ಚು ನಿವೇಶನಗಳನ್ನು ಕಬಳಿಸಿದ ಆರೋಪದ ಮೇಲೆ ಕುಖ್ಯಾತ ಭೂಗಳ್ಳರ ವಿರುದ್ಧ ಸಿಐಡಿ ಕಠಿಣ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ, 2000 ರ ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎನ್ನಲಾಗಿದೆ.

KCOCA ಅಡಿಯಲ್ಲಿ ಪ್ರಕರಣ ದಾಖಲಿಸಿದ ನಂತರ ಮುಂದಿನ ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದಾರೆ. ಸಿಐಡಿ ಅಧಿಕಾರಿಗಳು ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೋಸೆಸ್‌ನ ಸಹಚರರನ್ನು ಬಂಧಿಸಬೇಕು ಮತ್ತು ಅವರ ವಿರುದ್ಧ ಕೋಕಾ ಅಡಿಯಲ್ಲಿ ಕೇಸ್ ದಾಖಲಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Also Read  ಮಾಜಿ ಸಚಿವ ಟಿ. ಜಾನ್ ವಿಧಿವಶ​

error: Content is protected !!
Scroll to Top